ಡಿಸೆಂಬರ್ 10th, 2017

 

ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ದೋಷಿ


ಜಾರ್ಖಂಡ್ನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್ ಚಂದ್ರ ಗುಪ್ತಾ ಹಾಗೂ ಇತರ ಆರೋಪಿಗಳನ್ನು ದೋಷಿಗಳೆಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ರಾಜ್ಹಾರಾದಲ್ಲಿ ಖಾಸಗಿ ಸಂಸ್ಥೆ ವಿನಿ ಐರನ್ ಹಾಗೂ ಸ್ಟೀಲ್ ಉದ್ಯೋಗ್ ಲಿ.ಗೆ ಅನಧಿಕೃತವಾಗಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳ ಪೈಕಿ ನಾಲ್ವರು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್ ಚಂದ್ರ ಗುಪ್ತಾ, ಆಗಿನ ಮುಖ್ಯ ಕಾರ್ಯದರ್ಶಿ ಎ.ಕೆ.ಬಸು, ಇತರರು ದೋಷಿಗಳಾಗಿದ್ದಾರೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ವಿಷಯದಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ 2015ರ ಏಪ್ರಿಲ್ನಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಹಿರಿಯ ಕವಿ ಚೆನ್ನವೀರ ಕಣವಿಗೆ ‘ಸಿದ್ದಗಂಗಾಶ್ರೀ’ ಪ್ರಶಸ್ತಿ


ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘವು ಪ್ರತಿ ವರ್ಷ ಕೊಡಮಾಡುವ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಈ ವರ್ಷ ನಾಡಿನ ಹಿರಿಯ ಕವಿ ಚೆನ್ನವೀರ ಕಣವಿ ಅವರು ಭಾಜನರಾಗಿದ್ದಾರೆ.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ₹ 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಸಾಹಿತ್ಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಇಬ್ಬರಿಗೆ ‘ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ' ನೀಡಲಾಗುತ್ತದೆ.

Contributed by: Mallikajan.Korbu