JIGYASA (ಜಿಗ್ಯಾಸ)
ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವಾಲಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಜಂಟಿಯಾಗಿ ಜಾರಿಗೆ ತಂದಿರುವ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಬೆಸೆಯುವ ಯೋಜನೆ. ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಬೆಸೆಯುವ ಜಿಗ್ಯಾಸ ಯೋಜನೆಯನ್ನು ಕೇಂದ್ರೀಯ ವಿದ್ಯಾಲಯ ಸಂಘಟನೆ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕ ಸಂಶೋದನಾ ಮಂಡಳಿ( CSIR: COUNCIL FOR SCIENTIFIC AND INDUSTRIAL RESEARCH) ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲದಿನಗಳಲ್ಲಿಯೇ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅನ್ವೇಷಣೆಯ ಕಡೆ ಹೆಚ್ಚು ಒಲವು ಮೂಡಿಸಲು ಪ್ರೋತ್ಸಾಹ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ .
ಪ್ರಸಕ್ತ ಸಾಲಿನಲ್ಲಿ 1551 ಕೇಂದ್ರೀಯ ವಿದ್ಯಾಲಯ ಸಂಘಟನೆಯ 1 ಲಕ್ಷ ವಿದ್ಯಾರ್ಥಿಗಳು ಮತ್ತು 1 ಸಾವಿರ ಶಿಕ್ಷಕರು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ 48 ರಾಷ್ಟ್ರೀಯ ಪ್ರಯೋಗಾಲಯದ ವಿಜ್ಞಾನಿಗಳ ಜೊತೆ ಸಂಪರ್ಕಪಡೆದು ಕೊಳ್ಳಲಿದ್ದಾರೆ. ವಿಜ್ಞಾನ ಪ್ರತ್ಯೇಕ್ಷಿಕೆಗಳನ್ನು ಸಿದ್ಧಪಡಿಸುವುದು ಪ್ರಯೋಗಾಲಯಡಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದು, ವಿಜ್ಞಾನ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವುದು, ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸಿ ಸೂಕ್ತ ಪ್ರೋತ್ಸಾಹ ನೀಡುವುದು ಮತ್ತು ಇತ್ಯಾದಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿ ಸಮುದಾಯವನ್ನು ಹೆಚ್ಚು ಹೆಚ್ಚು ಪ್ರೋತ್ಸಾಹ ನೀಡುವುದು ಈ ಯೋಜನೆಯ ಉದ್ದೇಶ .
ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ:
ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ:
ಪ್ರಕಾಶ್‍ಚಾವಡೆಕರ್
ಡಾ.ಹರ್ಷವರ್ಧನ್